ಸಮುದಾಯದ ಮುಖಂಡರಲ್ಲಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಅಕ್ಟೋಬರ್ 7 ರಂದು ನಡೆಯುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಹೆಚ್ಚು ವಿಜೃಂಭಣೆಯಿಂದ ಆಚರಿಸಲು ಸಹಕರಿಸಬೇಕು ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು. ಪಟ್ಟಣದ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಪ್ರಸ್ತುತವಾಗಿ ನಡೆಯುತ್ತಿರುವ ವಿದ್ಯುಮಾನಗಳನ್ನು ಗಮನಿಸಿದರೆ ವಾಲ್ಮೀಕಿ ಸಮುದಾಯದರು ಒಗ್ಗಟ್ಟು ಪ್ರದರ್ಶಿಸುವುದು ಅನಿವಾರ್ಯವಾಗಿದೆ ಎಂದರು.