ಕವಾಡಿಗರಹಟ್ಟಿಯಲ್ಲಿ ಖಾಸಗಿ ಪೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಬಂಧ ಇಬ್ಬರು ಸಿ್ಬಂದಿಗಳನ್ನ ಚಿತ್ರದುರ್ಗದ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದು, ಈ ಕುರಿತು ಭಾನುವಾರ ಸಂಜೆ 4 ಗಂಟೆಗೆ ಮಾಹಿತಿ ಬೆಳಕಿಗೆ ಬಂದಿದೆ. ಇಕ್ವಿಟಾಸ್ ಪೈನಾನ್ಸ್ ಸಿಬ್ಬಂದಿಗಳಾದ ಮಂಜುನಾಥ್ ಹಾಗೂ ಮಾರುತಿ ಇಬ್ಬರನ್ನ ಬಂಧಿಸಲಾಗಿದೆ. ನಿನ್ನೆಯಷ್ಠೆ ಕವಾಡಿಗರಹಟ್ಟಿ ನೇತ್ರಾವತಿ ಎಂಬ ಮಹಿಳೆ ಪೈನಾನ್ಸ್ ಕಂಪನಿ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ಕುರಿತು ಚಿತ್ರದುರ್ಗ ಕೋಟೆ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು ಇಬ್ಬರು ಪೈನಾನ್ಸ್ ಸಿಬ್ಬಂದಿಗಳನ್ನ ಬಂಧಿಸಿದ್ದಾರೆ