ಸರಣಿ ಅಪಘಾತ ಸಂಭವಿಸಿ ಕೆಎಸ್ಆರ್ಟಿಸಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ . ಕೆ ಎಸ್ ಆರ್ ಟಿ ಸಿ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಗ್ಯಾಸ್ ಸಿಲಿಂಡರ್ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್ಆರ್ಟಿಸಿ ಬಸ್ನ ಮುಂಬಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಚಾಲಕನ ಸ್ಥಿತಿ ಗಂಭೀರವಾಗಿದೆ. ಸರಣಿ ಅಪಘಾತ ಸಂಭವಿಸಿದ್ದರಿಂದ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ನಡುವಿನ ಸಂಪರ್ಕ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿ ಸಂಜೆಯವರೆಗೂ ವಾಹನ ಸವಾರರು ಪರದಾಟ ಪಡಬೇಕಾಯಿತು.