ಪ್ರತಿಯೊಬ್ಬ ನಾಗರಿಕರೂ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಹಾದಿಯಲ್ಲಿ ಹೆಜ್ಜೆ ಹಾಕಿದಾಗ ಮಾತ್ರ ಮಾದಕ ದ್ರವ್ಯ ಮುಕ್ತ ಕರ್ನಾಟಕ ಸಾಧ್ಯವಾಗುತ್ತದೆ. ತಾಲ್ಲೂಕಿನಲ್ಲಿ ಮಾದಕ ದ್ರವ್ಯ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನಿರಂತರ ಜಾಗೃತಿ, ಅಭಿಯಾನಗಳನ್ನು ಕೈಗೊಳ್ಳಲಾಗುತ್ತಿದೆ. ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದ್ದು, ಆಗಸ್ಟ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆಯುವ ಈ ಅಭಿಯಾನದ ಮುಖ್ಯ ಉದ್ದೇಶ ಎಂದರೆ ಹೆಚ್ಚುತ್ತಿರುವ ಮಾದಕ ದ್ರವ್ಯ ದುರುಪಯೋಗ ಮತ್ತು ಅದರ ದುಷ್ಪರಿಣಾಮಗಳನ್ನು ಪರಿಹರಿಸುವತ್ತ ಗಮನಹರಿಸಲಾಗುತ್ತಿದೆ. ಮಾದಕ ದ್ರವ್ಯ ಮುಕ್ತ ಕರ್ನಾಟಕ ಅಭಿಯಾನ”ವನ್ನು ತಾಲ್ಲೂಕಿನ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರೆ ಸಮುದಾಯದೊಂದಿಗೆ ಮಾದಕ ದ್ರವ್ಯ ಬಳಕೆ ಮತ್ತು