ಮದ್ದೂರು ತಾಲ್ಲೂಕು ಭಾರತೀನಗರದ ಸ್ಫೂರ್ತಿ ಪತ್ತಿನ ಸಹಕಾರ ಸಂಘ ಕಳೆದ 25 ವರ್ಷಗಳ ಹಿಂದೆ ಸ್ಥಾಪನೆಗೊಂಡು ಗ್ರಾಮೀಣ ಭಾಗದ ಜನರ ಆರ್ಥಿಕ ಸ್ಥಿತಿಗತಿಗಳಲ್ಲಿ ಉತ್ತಮ ಪಡಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇದರ ಅಂಗವಾಗಿ 25 ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯನ್ನು ಭಾರತೀನಗರದಲ್ಲಿ ಸೆ.13 ರಂದು ಮಾಡಲಾಗುತ್ತಿದೆ ಎಂದು ಭಾರತೀಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಬಿ.ಎಸ್.ಬೋರೇಗೌಡ ತಿಳಿಸಿದರು. ಭಾರತೀನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ಸ್ಪೂರ್ತಿ ಪತ್ತಿನ ಸಹಕಾರ ಸಂಘದ ಬೆಳ್ಳಿ ಹಬ್ಬದ ಪ್ರಯುಕ್ತ ಆಡಳಿತ ಮಂಡಳಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವೈದ್ಯಕೀಯ ಸಂಶೋದನಾ ಸಂಸ್ಥೆ, ಮೈಸೂರಿನ ನಾರಾಯಣ ಹೃದಾಯಾಲಯ, ಅನನ್ಯ ಹಾರ್ಟ್ ಫೌಂಡೇಷನ್ ವತಿಯಿಂದ ಗ್ರಾಮೀಣ ಜನರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣ