ಹನೂರು ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಒಳಾಂಗಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ತಡರಾತ್ರಿಯಲ್ಲಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದ ವ್ಯಕ್ತಿ ಅಲ್ಲಿಯೇ ಮಲಗಿ ನಿದ್ರೆಹೋಗಿದ್ದ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಬೆಳ್ಳಿಗ್ಗೆ ಗಮನಿಸಿದ ಸಾರ್ವಜನಿಕರು ವ್ಯಕ್ತಿ ಅಸಹಜ ಸ್ಥಿತಿಯಲ್ಲಿ ಮಲಗಿರುವುದನ್ನು ಗಮನಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲಿಸಿದಾಗ ಆತ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಕೆಎಸ್‌ಆರ್‌ಟಿಸಿ ಅಧಿಕಾರಿ ರಂಗಸ್ವಾಮಿ ಅವರು ಸ್ಥಳಕ್ಕೆ ಆಗಮಿಸಿ, ತಕ್ಷಣವೇ ಹನೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಕ್ಕೆ ಪಡೆದು, ಮೃತನ ಸಂಬಂಧಿಕರ ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ. ಸಾವಿಗೆ ಕಾರಣ ಏನೆಂಬುದು ತಿಳಿದಿಲ್ಲ