ಪಟ್ಟಣದಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ಮುಂಜಾನೆಯವರೆಗೆ ಸುರಿದಂತ ಭಾರಿ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಹೆಚ್ ನರಸಿಂಹಯ್ಯ ವೃತ್ತದಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಚರಂಡಿಗಳ ಕೊಳಚೆ ನೀರು ಮಳೆ ನೀರಿರೊಂದಿಗೆ ಸೇರಿ ರಸ್ತೆ ಅಗಲಕ್ಕೂ ಹರಡಿ ಕಿರಿಕಿರಿಯಾಗಿ ಪರಿಣಮಿಸಿದೆ. ಇದರಿಂದಾಗಿ ಕೆಲಕಾಲ ವಾಹನ ಸಂಚಾರ ಸೇರಿದಂತೆ ನಾಗರೀಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಪದೇ ಪದೇ ಮಳೆ ಬಂದಾಗ ಈ ಸಮಸ್ಯೆ ಪುನರಾವರ್ತನೆಯಾಗುತ್ತಿದ್ದರೂ ಸಂಬಂಧಪಟ್ಟವರು ಕಣ್ಣಿದ್ದು ಕುರುಡರಂತಾಗಿದ್ದಾರೆ. ಇಂತಹ ಗಂಭೀರ ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಶಪಿಸುತ್ತಿದಾರೆ.