ಕೋಟಿಗಟ್ಟಲೆ ಕನ್ನಡಿಗರ ಪ್ರೀತಿ-ಅಭಿಮಾನವನ್ನು ಪಡೆದಿರುವ ನಾನು, ಒಂದಿಬ್ಬರ ನಕಾರಾತ್ಮಕ ಪ್ರತಿಕ್ರಿಯೆಗಳಿಗೆ ಉತ್ತರ ನೀಡಬೇಕಾದ ಅಗತ್ಯವಿಲ್ಲ. ಜನರೇ ಇಂತಹ ಟೀಕೆಗಳಿಗೆ ಪ್ರತಿಕ್ರಿಯೆ ನೀಡುತ್ತಾರೆ. ಬಿಜೆಪಿಯಲ್ಲಿ ಮೈಸೂರು ಸಂಸದ ಯದುವೀರ್ ಅವರಂತಹ ಸುಸಂಸ್ಕೃತ, ವಿದ್ಯಾವಂತ ಮನಸ್ಸುಗಳು ಹೆಚ್ಚಾಗಬೇಕು ಎಂದು ದಸರಾ ಉದ್ಘಾಟನೆಗೆ ಆಯ್ಕೆಯಾದ ಬಗ್ಗೆ ಟೀಕಿಸಿದವರಿಗೆ ಸಾಹಿತಿ ಬಾನು ಮುಷ್ತಾಕ್ ಅವರು ತಿರುಗೇಟು ನೀಡಿದ್ದಾರೆ.ಹಾಸನದಲ್ಲಿ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಟ್ಯಾಂತರ ಕನ್ನಡಿಗರು ಎಷ್ಟೊಂದು ಪ್ರೀತಿ ಅಭಿಮಾನ ಕೊಡ್ತಿದ್ದಾರೆ. ಒಬ್ಬರು ಅಥವಾ ಇಬ್ಬರ ನೆಗೆಟಿವಿಟಿಗೆ ಯಾಕೆ ಪ್ರತಿಕ್ರಿಯೆ ಕೊಡಬೇಕು. ಅದರ ಅಗತ್ಯ ಇಲ್ಲ ಎನ್ನಿಸುತ್ತದೆ. ಈ ಟೀಕೆಗೆ ಜನರೆ ಪ್ರತಿಕ್ರಿಯೆ ಕೊಡುತ್ತಾರೆ