ಕನ್ನಡ ಶಾಲೆಗಳ ರಕ್ಷಣೆಗೆ ಹಾಗೂ ಶಾಲೆಗಳಿಗೆ ವಿಧಿಸಿರುವ ಶರತ್ತುಗಳನ್ನು ಸಡಿಲಗೊಳಿಸಲು ಒತ್ತಾಯಿಸಿ ಕಾಳಗಿ ಪಟ್ಟಣದಲ್ಲಿ ಒಂದು ದಿನದ ಧರಣಿ ನಡೆಸಲಾಯಿತು. ಬುಧವಾರ 3 ಗಂಟೆಗೆ ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ತಾಲ್ಲೂಕು ಘಟಕ ಹಾಗೂ ಕನ್ನಡಪರ ಸಂಘಟನೆಗಳ ವತಿಯಿಂದ ನಡೆದ ಧರಣಿಯಲ್ಲಿ, ಕನ್ನಡ ಶಾಲೆಗಳನ್ನು ಉಳಿಸಿ ಮತ್ತು ಕನ್ನಡ ಶಾಲೆಗಳ ಸಬಲೀಕರಣ ಕಾಯ್ದೆ ಜಾರಿಗೆ ತರಲಿ ಎಂದು ಒತ್ತಾಯಿಸಿ ಕಾಳಗಿ ತಹಶಿಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.