ದಾಂಡೇಲಿ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿಯಾಗಿದೆ. ಸದೃಢ ಆರೋಗ್ಯ ನಿರ್ಮಾಣಕ್ಕೆ ವ್ಯಾಯಾಮ, ಕ್ರೀಡೆ ಪರಿಣಾಮಕಾರಿಯಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಒಂದಲ್ಲ ಒಂದು ರೀತಿಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸಬೇಕು ಎಂದು ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ. ದೇಶಪಾಂಡೆ ಅವರು ಹೇಳಿದರು. ಅವರು ಇಂದು ಗುರುವಾರ ಬೆಳಿಗ್ಗೆ 10:30 ಗಂಟೆ ಸುಮಾರಿಗೆ ದಾಂಡೇಲಿ ನಗರದ ಡಿಎಫ್ಎ ಮೈದಾನದಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡುತ್ತಿದ್ದರು.