ಕಲಬುರಗಿ : ಮಹಾರಾಷ್ಟ್ರದಿಂದ ನಿರಂತರವಾಗಿ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್‌ಗೆ ನೀರು ಬಿಡಲಾಗ್ತಿದ್ದು, ಸೊನ್ನ ಬ್ಯಾರೇಜ್‌ನಿಂದ ಭೀಮಾ ನದಿಗೆ 2.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ ಎಂದು ಸೊನ್ನ ಬ್ಯಾರೇಜ್‌ನ ಅಧಿಕಾರಿಗಳು ತಿಳಿಸಿದ್ದಾರೆ.. ಈ ಬಗ್ಗೆ ಆಗಷ್ಟ್ 23 ರಂದು ಮಧ್ಯಾನ 3 ಗಂಟೆಗೆ ಮಾಹಿತಿ ನೀಡಿದ್ದಾರೆ.. ಸೊನ್ನ ಬ್ಯಾರೇಜ್‌ನಿಂದ 2.20 ಲಕ್ಷ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ಭೀಮಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.. ಅಲ್ಲದೇ ಭೀಮಾ ತೀರದ 90 ಕ್ಕೂ ಅಧಿಕ ಹಳ್ಳಿಗಳಿಗೆ ಪ್ರವಾಹ ಭೀತಿ ಎದುರಾಗಿದ್ದು, ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ