ಯಲ್ಲಾಪುರ : ಪಟ್ಟಣದ ಎಲ್.ಎಸ್.ಎಂ.ಪಿ ಸೊಸೈಟಿ 76 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ 52.06 ಲಕ್ಷ ರೂ. ಲಾಭ ಗಳಿಸಿದೆ. ಸೆ.13 ರಂದು ಮಧ್ಯಾಹ್ನ 3.30 ಗಂಟೆಗೆ ಹುಲ್ಲೋರಮನೆಯ ದೇವಾಲಯದ ಸಭಾಭವನದಲ್ಲಿ ಸರ್ವಸಾಧಾರಣ ಸಭೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನಾಗರಾಜ ಕವಡಿಕೇರಿ ಹೇಳಿದರು. ಅವರು ಸಂಘದ ಕಚೇರಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದರು.