ಸಹಕಾರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಗಣನೀಯ ಸೇವೆ ಸಲ್ಲಿಸಿರುವ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಿ.ಸುಧಾಕರ್ ಅವರ ಸಹಕಾರಿ ಸೇವೆ ಗುರುತಿಸಿ, ಸರ್ಕಾರ 2024ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸೌಹಾರ್ದ ಸಹಕಾರಿ ಕಾಯ್ದೆ ಮತ್ತು ಸೌಹಾರ್ದ ಸಹಕಾರಿ ಚಳುವಳಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು. ಇನ್ನೂ ಇದೇ ಸಂದರ್ಭದಲ್ಲಿ ಸ್ಮರಣ ಸಂಚಿಕೆಯನ್ನು ಲೋಕಾರ್ಪಣೆಯನ್ನು ಸಚಿವ ಸುಧಾಕರ್ ಬಿಡುಗಡೆಗೊಳಿಸಿದರು.