ಚಿತ್ರದುರ್ಗ ನಗರದಲ್ಲಿ ಹಿಂದೂ ಮಹಾಗಣಪತಿ ಶೋಭಾ ಯಾತ್ರೆ ಕಾರ್ಯಕ್ರಮ ಹಿಂದೂ ಮಹಾಗಣಪತಿ ಉತ್ಸವದ ಶೋಭಾಯಾತ್ರೆಗೂ ಮೊದಲು ಭಗವಾಧ್ವಜ, ಹೂವಿನ ಹಾರ ಹಾಗೂ ತಿರುಪತಿ ದೇವಸ್ಥಾನದ ಮಾದರಿ ಪ್ರತಿಕೃತಿ ಹರಾಜು ಪ್ರಕ್ರಿಯೆ ನಡೆಸಲಾಯಿತು. ಭಗವಾ ಧ್ವಜವನ್ನು ಬಿಜೆಪಿ ಮುಖಂಡ ಹನುಮಂತೇಗೌಡ 6 ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಪಡೆದುಕೊಂಡರು. ತಿರುಪತಿ ತಿಮ್ಮಪ್ಪ ದೇವಸ್ಥಾನದ ಮಾದರಿಯನ್ನು ವಜ್ರ ಮಹೇಶ್ 5.25 ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಪಡೆದುಕೊಂಡರು.