ರಾಜ್ಯ ಸರ್ಕಾರದ ಒಳ ಮೀಸಲಾತಿ ಹಂಚಿಕೆಯಲ್ಲಿ ಬಂಜಾರಾ, ಭೋವಿ, ಕೊಂಚ, ಕೊರಮ ಸೇರಿದಂತೆ ಹಲವಾರು ಹಿಂದುಳಿದ ಜಾತಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕಮಲಾಪುರದಲ್ಲಿ ಶೆನಿವಾರ 11 ಕ್ಕೆ ಭಾರಿ ಪ್ರತಿಭಟನೆ ನಡೆಯಿತು. ಸರ್ಕಾರ ಹೊಂದಿರುವ ವರದಿಯಲ್ಲಿ ಅನೇಕ ಲೋಪದೋಷಗಳಿದ್ದು, 101 ಜಾತಿಗಳ ಜನಸಂಖ್ಯೆ, ಶೈಕ್ಷಣಿಕ, ಔದ್ಯೋಗಿಕ ಹಾಗೂ ಸಾಮಾಜಿಕ ಸ್ಥಿತಿಯನ್ನು ನಿಖರವಾಗಿಲ್ಲ, ಇದನ್ನು ಸರಿಪಡಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಇಲಾಖೆಗೆ ಮನವಿ ಪತ್ರ ರವಾನಿಸಲಾಯಿತು.