ಮಂಗಳವಾರದಂದು ನಡೆಯುತ್ತಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದು ಬೀಗಲಿ ಎಂದು ಅಭಿಮಾನಿಗಳು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಸಂಜೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ದೇಗುಲ ಮುಂಭಾಗ ಆರ್ ಸಿಬಿ ಜೆರ್ಸಿ ಹಿಡಿದು ಜಯಘೋಷ ಕೂಗಿದ ಅಭಿಮಾನಿಗಳು ಈ ಸಲ ಕಪ್ ನಮ್ದೆಯಾಗಲಿ ಎಂದು ಮಾದಪ್ಪನಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ, ಯಾರಾ ಕಣ್ಣು ಬೀಳದಿರಲಿ, ಈ ಸಲ ಬೆಂಗಳೂರು ಕಪ್ ಗೆಲ್ಲಲಿ ಎಂದು ಹಾರೈಸಿ ಅಭಿಮಾನಿಗಳು ಈಡುಗಾಯಿ ಒಡೆದಿದ್ದಾರೆ.