ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನಿವಾಸದ ಮೇಲೆ ಮಂಗಳವಾರ ಮಧ್ಯಾಹ್ನ 12 ಗಂಟೆ ವೇಳೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಹಳೆಟೌನ್ ಬಡಾವಣೆಯಲ್ಲಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ ಮನೆಯಲ್ಲಿ ದಾಖಲೆ ಪರಿಶೀಲನೆ ಮಾಡಿ, ದಾಳಿ ಮುಂದುವರೆಸಿದ್ದಾರೆ. ಇನ್ನೂ ಶಾಸಕ ವೀರೇಂದ್ರ ಪಪ್ಪಿ ಅವರಿಗೆ ಸೇರಿದ ನಾಲ್ಕು ಕಾರ್ ಗಳನ್ನ ಜಪ್ತಿ ಮಾಡುವ ಸಾಧ್ಯತೆ ಕೂಡಾ ಇದೆ. ಅಲ್ಲದೆ ನಗರದಲ್ಲಿನ ಹಲವು ಬ್ಯಾಂಕ್, ಪೊಸ್ಟ್ ಆಫೀಸ್ ಖಾತೆಗಳ ಮಾಹಿತಿ ಕೂಡಾ ಇಡಿ ಅಧಿಕಾರಿಗಳು ಕಲೆ ಹಾಕಿದ್ದಾರೆ. ಇಟ್ಟು 8 ಇನ್ನೋವಾ ವಾಹನಗಳಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಧ್ಯ ಶಾಸಕ ವೀರೇಂದ್ರ ಪಪ್ಪಿ ಇಡಿ ಕಸ್ಟಡಿಯಲ್ಲಿದ್ದಾರೆ