ತತ್ವಜ್ಞಾನಿ, ಶ್ರೇಷ್ಠ ಶಿಕ್ಷಕ, ರಾಷ್ಟಪತಿಯಾಗಿ ಡಾ. ರಾಧಾಕೃಷ್ಣನ್‌ರವರ ಶಿಸ್ತು, ಶ್ರದ್ದೆ ನಮಗೆಲ್ಲ ಮಾದರಿಯಾಗಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್ ವಿ ಸಂಕನೂರ ಅವರು ಅಭಿಪ್ರಾಯ ಪಟ್ಟರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.