ಹುಬ್ಬಳ್ಳಿ: ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿರಗುಪ್ಪಿ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದ ವಲ್ಲಮೇಶ್ವರ ದೇವಸ್ಥಾನದ ಆವರಣದಲ್ಲಿ ಉಚಿತ ಆರೋಗ್ಯ ಮೇಳ ಜರುಗಿತು. ಆರೋಗ್ಯ ಮೇಳದಲ್ಲಿ ೧೫೦ ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ವೇಳೆ ವೈದ್ಯಾಧಿಕಾರಿ ಡಾ. ಮಹಾಂತೇಶ ಅಡ್ವಾನಿ, ನೇತೃತ್ವದಲ್ಲಿ ಉಚಿತ ಆರೋಗ್ಯ ಮೇಳ ಜರುಗಿತು. ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು.