ನಗರದಲ್ಲಿ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ರವರು ಬೆಂಗಳೂರು ನಗರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ "ಸ್ವಚ್ಛ ಬೆಂಗಳೂರು" ಅಭಿಯಾನವನ್ನು ನಡೆಸಲು ಆದೇಶ ನೀಡಿದ್ದು, ಅದರಂತೆ ಶನಿವಾರ ಸಂಜೆ 5 ಗಮನಟೆ ಸುಮಾರಿಗೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರ ನಿರ್ದೇಶನದಂತೆ, ವಲಯ ಆಯುಕ್ತರ ಮಾರ್ಗದರ್ಶನದಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ಹಾಗೂ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪೂರ್ವ ವಲಯ ವ್ಯಾಪ್ತಿಯ ಹಲಸೂರು ಕೆರೆಯಲ್ಲಿ ಹೂಳೆತ್ತುವ ಕಾರ್ಯ ನಡೆಸಲಾಯಿತು.