ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಎಂಬ ಬಿ ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಗುರುವಾರ ಮಧ್ಯಾಹ್ನ ಸಂಚಾರಿ ಆರೋಗ್ಯ ಘಟಕದ ವತಿಯಿಂದ ಕಾರ್ಮಿಕರ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನೂರಾರು ಜನ ಕಾರ್ಮಿಕರು ಭಾಗವಹಿಸಿ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಂಡರು. ಈ ಸಂದರ್ಭದಲ್ಲಿ ಗ್ಯಾರೇಜ್ ಮಾಲೀಕರು ಮತ್ತು ಕಾರ್ಮಿಕರ ಸಂಘದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ನೂರಾರು ಜನ ಕಾರ್ಮಿಕರು ಭಾಗವಹಿಸಿದ್ದರು.