ಕುಡಿದ ಮತ್ತಿನಲ್ಲಿ ಕಾರು ಚಾಲಕನೊಬ್ಬ ಯದ್ವಾ ತದ್ವ ಕಾರು ಚಾಲನೆ ಮಾಡಿ ಬೈಕ್, ಆಟೋ, ಕಾರು ಸೇರಿದಂತೆ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ದಾವಣಗೆರೆಯ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಕುಮಾರ್ ಕುಡಿದ ಮತ್ತಿನಲ್ಲಿ ಬೇಕಾಬಿಟ್ಟಿ ವಾಹನ ಚಲಾಯಿಸಿದ ಕಾರು ಚಾಲಕನಾಗಿದ್ದು, ಶಿವಮೊಗ್ಗದ ಗೋಪಿ ಸರ್ಕಲ್ ನಿಂದ ಮಹಾವೀರ ಸರ್ಕಲ್ ತಲುಪುವುದರಲ್ಲಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಡಿವೈಡರ್ ಗೆ ಡಿಕ್ಕಿಯಾಗಿ ಕಾರು ನಿಂತಿದೆ ಕಾರು ಚಾಲಕನನ್ನ ಸಂಚಾರಿ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆತ ಮದ್ಯ ಸೇವನೆ ಮಾಡಿರುವುದು ಕಂಡುಬಂದಿದೆ.