ಸರ್ಕಾರಿ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನ ನೇಮಿಸುವಂತೆ ಆಗ್ರಹಿಸಿ ಬಾಗಲಕೋಟೆ ನಗರದಲ್ಲಿಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬಾಗಲಕೋಟೆ ನಗರದ ಜಿಲ್ಲಾಡಳಿತಭವನದ ಮುಂದೆ ಪ್ರತಿಭಟನೆ ನಡೆಸಿದ ಆಲ್‌ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿಗಳು ಅತಿಥಿ ಉಪನ್ಯಾಸಕರನ್ನ ನೇಮಿಸಿವಂತೆ ಆಗ್ರಹಿಸಿದರು.ಘೋಷಣೆಗಳನ್ನಕೂಗಿ ಸರ್ಕಾರ ಬೇಡಿಕೆಗಳನ್ನಜ ಈಡೇರಿಸಕೆಂದು ಒತ್ತಾಯಿಸಿದರು. ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನ ಸರ್ಕಾರ ಬಗೆಹರಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.