ಬೀದರ್ : ತಾಲುಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯ ಲಾಲಬಾಗ್ ಸಮೀಪ 2021ರಲ್ಲಿ ಜಮೀನು ವ್ಯಾಜ್ಯ ಸಂಬಂಧಿಸಿದಂತೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 25 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಗುರುವಾರ ಮಧ್ಯಾಹ್ನ 1 ಗಂಟೆಗೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.