ಗಣೇಶ ಹಬ್ಬ ಮುಗಿಯುವ ತನಕ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಬಂಧಿಸುವAತೆ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಎಸ್.ರಾಮಪ್ಪ ಆಗ್ರಹಿಸಿದರು. ದಾವಣಗೆರೆ ಜಿಲ್ಲೆಯ ಹರಿಹರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲಾಧಿಕಾರಿಗಳಾದ ಜಿ.ಎಂ ಗಂಗಾಧರಸ್ವಾಮಿ ಅವರು ಗಣೇಶ ಮತ್ತು ಈದ್ ಮಿಲಾದ್ ಹಬ್ಬದಲ್ಲಿ ಡಿಜೆ ನಿಷೇಧ ಮಾಡಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದರು. ಆದರೆ ಈ ಆದೇಶವನ್ನು ಮಾಜಿ ಸಚಿವ ರೇಣುಕಾಚಾರ್ಯ ತಳ್ಳಿಹಾಕಿ ತಾಕತ್ತಿದ್ದರೆ ಡಿಜೆ ನಿಲ್ಲಿಸಿ ನೋಡೋಣ ಎಂದು ಅಧಿಕಾರಿಗಳಿಗೆ ಸವಾಲು ಹಾಕಿದ್ದಾರೆ ಎಂದರು.