ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ಅಧಿಸೂಚನೆ ಹಾಗೂ ಸರ್ಕಾರದ ಆದೇಶದಂತೆ ಪಿ.ಓ.ಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಹಾಗೂ ಭಾರಲೋಹ ಮಿಶ್ರಿತ ರಾಸಾಯನಿಕ ಬಣ್ಣದಿಂದ ತಯಾರಿಸಿದ ಗಣೇಶ ವಿಗ್ರಹಗಳ ಉತ್ಪಾದನೆ ಹಾಗೂ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಸಾರ್ವಜನಿಕರು ಪಿ.ಒ.ಪಿ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ, ಪೂಜೆಯ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ, ಜಲಮೂಲಗಳು ಕಲುಷಿತಗೊಳ್ಳುತ್ತವೆ. ನೀರಿನ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ.