ಈ ವರ್ಷದ ಮೂರನೇ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಸೆಪ್ಟಂಬರ್ ೧೩ ರಂದು ಹಮ್ಮಿಕೊಂಡಿರುವುದಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಅವರು ತಿಳಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ನ್ಯಾಯಾಂಗ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವರ್ಷದಲ್ಲಿ ನಾಲ್ಕು ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ಮಾರ್ಚ್ ೮, ಜುಲೈ ೧೨ ರಂದು ಅದಾಲತ್‌ಗಳು ಯಶಸ್ವಿಯಾಗಿ ನಡೆದಿವೆ ಎಂದರು.