ನಗರದಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಬಾರಿ ಒಟ್ಟು 1730 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು 27 ಕಡೆಯಲ್ಲಿ ಈದ್ ಮಿಲಾದ್ ಆಚರಣೆ ನಡೆಯಲಿದೆ ಎಂದು ಎಸ್ಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ. 1730 ಗಣೇಶ ಮೂರ್ತಿಗಳ ಪೈಕಿ 7 ಅತಿ ಸೂಕ್ಷ್ಮ, 157 ಸೂಕ್ಷ್ಮ ಗಣೇಶಗಳೆಂದು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ. 27 ಈದ್ ಮಿಲಾದ್ ಮೆರವಣಿಗೆಗಳಲ್ಲಿ 3 ಮೆರವಣಿಗೆಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಹೀಗಾಗಿ ಎರಡು ಹಬ್ಬದ ಆಚರಣೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತಿ ಸುವ್ಯವಸ್ಥೆಯಿಂದ ಆಚರಿಸುವಂತೆ ಬುಧವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ