ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಗೆ ಸಂಬಂಧಿಸಿ, ನಟ ಅನಿರುದ್ದ ಅವರು ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಕುಮಾರಕೃಪಾ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದೆ. ಹಿಂದೆಯೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇವತ್ತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಕೊಡಿ ಎಂದು ಕೇಳುವುದು ಎಂದರೆ ತಪ್ಪು ಆಗುತ್ತದೆ. ಕರ್ನಾಟಕ ರತ್ನ ಪ್ರಶಸ್ತಿಗೆ ವಿಷ್ಣುವರ್ಧನ್ ಅವರು ಅರ್ಹರು. ಹಾಗಾಗಿ ಕೇಳುವ ಬದಲಾಗಿ ನೆನಪು ಮಾಡಿದ್ದೇನೆ ಎಂದರು.