ಸಮಾಜದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿ.ಪಂ.ಕಚೇರಿಯಲ್ಲಿ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳು ಜನರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹೆಚ್ಚಿನ ಶಕ್ತಿ ತುಂಬಿದೆ ಎಂದರು. ಗ್ಯಾರೆಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳೂ ಸಹ ಅಗತ್ಯ ಸಹಕಾರ ನೀಡಬೇಕು. ಈ ಹಿಂದೆ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ನಿರಂತರ ದೂರುಗಳು ದಾಖಲಾಗಿದ್ದು, ಈ ಸಂಬಂಧ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಅಕ್ಕಿಯನ್