ನಾಗಮಂಗಲ ಪಟ್ಟಣದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಮೆರವಣಿಗೆ ಪೊಲೀಸರ ಬಿಗಿ ಭದ್ರತೆಯಲ್ಲಿ ಅರಂಭವಾಗಿದ್ದು 12 ಗಣೇಶ ಮೂರ್ತಿಗಳನ್ನು ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ. ಗುರುವಾರ ಮಧ್ಯಾಹ್ನ ಗಣೇಶನ ಮೆರವಣಿಗೆಯಲ್ಲಿ ಸಾವಿರಾರು ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು. ಗಣೇಶ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಯುವಕ ಯುವತಿಯರು, ಮಹಿಳೆಯರ ಸಖತ್ ಸ್ಟೆಪ್ ಹಾಕಿ ಗಮನ ಸೆಳೆದರು. ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಕಟ್ಟೆಚ್ಚರ ವಹಿಸಲಾಗಿದೆ. ಕಳೆದ ವರ್ಷ ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಕೋಮುಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ರಾತ್ರಿ ಗಣೇಶ ವಿಸರ್ಜನೆಗೆ ಬ್ರೇಕ್ ಹಾಕಿ ಹಗಲಿನಲ್ಲಿ ಕ್ರಮ ವಹಿಸಲಾಗಿದೆ.