ಸರ್ಕಾರದ ಐದು ಗ್ಯಾರಂಟಿ ಪಡೆಯುವ ಫಲಾನುಭವಿ ತಾಯಂದಿರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಡ್ಡಾಯವಾಗಿ ಸೇರಿಸಿದರೆ ಮಾತ್ರ ಐದು ಗ್ಯಾರಂಟಿ ಕೊಡುತ್ತಿವಿ ಎಂದು ಮಾಡಿದರೆ ಒಳ್ಳೆಯದು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಆಗ ಮಕ್ಕಳ ಹಾಜರಾತಿ ಸಂಖ್ಯೆ ಹೆಚ್ಚಾಗಬಹುದು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ದಾವಣಗೆರೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕöÈತರಿಗೆ ಹಾಗೂ ದಾವಣಗೆರೆ ಉತ್ತರ ಮತ್ತು ದಕ್ಷಿಣ ವಲಯದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.