ಧರ್ಮಸ್ಥಳದ ನೇತ್ರಾವತಿ ನದಿ ತಟದ ತನಿಖೆಯ ನೆಪದಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಸಹಿಸಲಾಗುವುದಿಲ್ಲ, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕುರುಗೋಡು ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ ಎಚ್ಚರಿಸಿದರು.ಪಟ್ಟಣದ ದೊಡ್ಡ ಬಸವೇಶ್ವರ ದೇವಾಲಯದ ಮುಂಭಾಗದಲ್ಲಿ ಆಗಸ್ಟ್ 22, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಡೆದ ಧರ್ಮ ರಕ್ಷಣೆಗಾಗಿ ಹೋರಾಟ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಧರ್ಮ ಹಾಗೂ ಪವಿತ್ರ ಕ್ಷೇತ್ರಗಳ ವಿರುದ್ಧ ನಡೆಯುವ ದಾಳಿ ನಿಲ್ಲಿಸಬೇಕು, ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ತೀವ್ರಗೊಳಿಸಲಾಗುತ್ತದೆ” ಎಂದರು.ಪುರಸಭೆ ಸದಸ್ಯ ಬುಟ್ಟ ಮಲ್ಲಿಕಾರ್ಜುನ ಅವರು, “ಧರ್ಮಸ್ಥಳ ಧರ್ಮಾಧಿಕಾರಿಗಳ ವಿರುದ್ಧ ನಡೆಯುತ್ತಿರುವ ಪಿತೂರಿ ಕೋಟ್ಯಾಂತರ ಭಕ್ತರ ನ