ಪಟ್ಟಣದಲ್ಲಿ ಇಂದು ಮುಂಜಾನೆಯವರೆಗೆ ಸುರಿದಂತ ಭಾರಿ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಹಾಗೆಯೇ ಡಾ.ಹೆಚ್. ನರಸಿಂಹಯ್ಯ ವೃತ್ತದಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಚರಂಡಿಗಳ ಕೊಳಚೆ ನೀರು ಮಳೆ ನೀರಿರೊಂದಿಗೆ ಸೇರಿ ಸಮಸ್ಯೆಯಾಗಿದೆ. ಇದರಿಂದಾಗಿ ಕೆಲಕಾಲ ವಾಹನ ಸಂಚಾರ ಸೇರಿದಂತೆ ನಾಗರೀಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಪದೇ ಪದೇ ಈ ಸಮಸ್ಯೆ ಪುನರಾವರ್ತನೆಯಾಗುತ್ತಿದ್ದರೂ ಸಂಬಂಧಪಟ್ಟವರು ಕಣ್ಣಿದ್ದು ಕುರುಡರಂತಾಗಿದ್ದಾರೆ. ಇಂತಹ ಗಂಭೀರ ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಇಂದು ಸುದ್ದಿ ಪ್ರಕಟಿಸಲಾಗಿತ್ತು. ಇದರಿಂದಾಗಿ ಕೆಲವೇ ಗಂಟೆಗಳಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ,ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.