ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ನಾಯಕ ಜನಾಂಗದ ಬೆಂಬಲವು ಕಾರಣವಾಗಿರುತ್ತದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಕೆ.ಎನ್. ರಾಜಣ್ಣ ಅವರು ಸಹಕಾರ ಖಾತೆಯನ್ನು ಸಮರ್ಥವಾಗಿ ನಿರ್ವಹಿಸಿರುತ್ತಾರೆ ಎಂಬುದಾಗಿ ವಾಲ್ಮೀಕಿ ನಾಯಕ ಮಹಾಸಭಾ ನಿಕಟ ಪೂರ್ವ ಅಧ್ಯಕ್ಷ ಜೆ.ಬಿ.ರಾಜು ಅವರು ಹೇಳಿದರು. ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಪುನಃ ಸಂಪುಟಕ್ಕೆ ತೆಗೆದುಕೊಳ್ಳಬೇಕೆಂದು ಹಿರಿಯೂರು ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದಿಂದ ಮನವಿ ನಗರದ ತಾ.ಕಚೇರಿ ಬಳಿ ಸೋಮವಾರ ತಹಶೀಲ್ದಾರ್ ಮೂಲಕ ಸಿಎಂ ಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.