ಮಂಗಳವಾರ ಸಂಜೆ 4.30ಕ್ಕೆ ಕಾರವಾರ ತಾಲೂಕಾ ನೋಂದಾಯಿತ ಗುತ್ತಿಗೆದಾರರ ಸಂಘದಿಂದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರಿಗೆ ಮನವಿ ಸಲ್ಲಿಸಿದ್ದಾರೆ. ಗುತ್ತಿಗೆದಾರರು ಕಾರವಾರ ನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಯನ್ನು 2021-22ರಿಂದ 2023-24ರವರೆಗೆ ನಡೆಸಿದ್ದಾರೆ. ಆದರೆ ಬಿಲ್ ಪಾವತಿ ನಗರಸಭೆ ಮಾಡಿಲ್ಲ. ಬ್ಯಾಂಕಿನಲ್ಲಿ ಸಾಲ ಮಾಡಿ ಕಾಮಗಾರಿ ನಡೆಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮೈಗೊಳ್ಳುವಂತೆ ಗುತ್ತಿಗೆದಾರರು ಒತ್ತಾಯಿಸಿದ್ದಾರೆ.