ಕಲಬುರಗಿ : ಕಳೆದ ರಾತ್ರಿಯಿಂದ ಸುರಿಯುತ್ತಿರೋ ನಿರಂತರ ಮಳೆಯಿಂದಾಗಿ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಪಡಸಾವಳಿ ಗ್ರಾಮ ಸಂಪೂರ್ಣ ಜಲಾವೃತವಾಗಿ ಜನ ಹೊರಗೆ ಬಾರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸೆ11 ರಂದು ಬೆಳಗ್ಗೆ 8.30 ಕ್ಕೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಬಿಟ್ಟುಬಿಡದೆ ಸುರಿಯುತ್ತಿರೋ ಮಳೆಯಿಂದ ಗ್ರಾಮದ ಸುತ್ತಮುತ್ತಲಿನ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಪರಿಣಾಮ ಪಡಸಾವಳಿ ಗ್ರಾಮದ ಮನೆಗಳಿಗೂ ಸಹ ನೀರು ಹೊಕ್ಕು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ