ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲಿಯೇ 2024 25 ನೇ ಸಾಲಿನಲ್ಲಿ 36.75 ಕೋಟಿ ರೂಪಾಯಿ ಲಾಭಗಳಿಸಿದೆ. ಮುಂದಿನ ಬಾರಿ 45 ಕೋಟಿ ರೂಪಾಯಿ ಲಾಭ ಮಾಡುವ ಯೋಚನೆ ಹೊಂದಲಾಗಿದೆ ಎಂದು ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಹೇಳಿದರು.ಬ್ಯಾಂಕ್ ಸ್ಥಾಪನೆಗೊಂಡು 72 ವರ್ಷ ಕಳೆದಿದ್ದು, 73ನೇ ವರ್ಷಕ್ಕೆ ಕಾಲಿಟ್ಟಿದ್ದೇವೆ ಬ್ಯಾಂಕಿನ ಇತಿಹಾಸದಲ್ಲಿಯೇ ಅತಿ ಹೆಚ್ಚು ಲಾಭಗಳಿಸಿದ ಕೀರ್ತಿ ನಮಗಿದೆ ಎಂದರು.