ಭದ್ರಾವತಿ ತಾಲೂಕಿನ ವೀರಶೈವ ಸಭಾಭವನದಲ್ಲಿ ನಗರಸಭೆಯ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷರಾದ ಲತಾ ಚಂದ್ರಶೇಖರ್, ಮಾಜಿನಗರ ಸಭಾಧ್ಯಕ್ಷರಾದ ಬಿಕೆ ಮೋಹನ್, ಸ್ಥಾಯಿ ಸಮಿತಿಯ ಅಧ್ಯಕ್ಷ ಕಾಂತರಾಜ್ ನಗರಸಭಾ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಪೌರಕಾರ್ಮಿಕರು ಉಪಸ್ಥಿತರಿದ್ದರು. ಅದೇ ರೀತಿ ಪೌರಕಾರ್ಮಿಕರಲ್ಲಿ 20ಕ್ಕೂ ಹೆಚ್ಚು ಮಹಿಳೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು.