ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರ ಪಥಸಂಚಲನ ನಡೆಯಿತು. ಶನಿವಾರ ಮಧ್ಯಾಹ್ನ ನಡೆದ ಪಥಸಂಚಲನದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮತ್ತು ಡಿವೈಎಸ್ಪಿ ಬಿ ಎಸ್ ತಳವಾರ ನೇತೃತ್ವದಲ್ಲಿ ಶಹರ ಪೊಲೀಸ್ ಠಾಣೆಯಿಂದ ಆರಂಭಗೊಂಡ ಮತ ಸಂಚಲನ ನಗರದ ಪ್ರಮುಖ ರಸ್ತೆಗಳ ಮೂಲಕ ಪೊಲೀಸ್ ಠಾಣೆ ವರೆಗೆ ನಡೆಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳಾದ ರಾಜಕುಮಾರ ವಾಜಂತ್ರಿ, ವೀರಾರೆಡ್ಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.