ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದಲ್ಲಿ 2025 26ನೇ ಸಾಲಿನ ದಸರಾ ಕ್ರೀಡಾಕೂಟವನ್ನು ಸುರಪುರ ಮತಕ್ಷೇತ್ರದ ಶಾಸಕ ರಾಜ ವೇಣುಗೋಪಾಲ ನಾಯಕ ಅವರು ವಾಲಿಬಾಲ್ ಆಡುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು ನಂತರ ಶಾಸಕರು ಮಾತನಾಡಿ ಕ್ರೀಡಾಕೂಟದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬ ಕ್ರೀಡಾಪಟು ಸೋಲು ಗೆಲುವು ಸಮಾನವಾಗಿ ಸ್ವೀಕರಿಸುವಂತೆ ಶಾಸಕರು ತಿಳಿಸಿದರು ಕ್ರೀಡೆಯಿಂದ ಮನುಷ್ಯನ ಆರೋಗ್ಯ ಉತ್ತಮವಾಗಿರುತ್ತದೆ ಪ್ರತಿಯೊಬ್ಬರೂ ಕೂಡ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ತಿಳಿಸಿದರು ದೈಹಿಕ ಶಿಕ್ಷಕರು ಉತ್ತಮ ತೀರ್ಪುಗಳನ್ನು ನೀಡುವಂತೆ ಶಾಸಕರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹುಣಸಿಗಿಪಟ್ಟಣದ ಜನಪ್ರತಿನಿಧಿಗಳು ಶಿಕ್ಷಕರು ಭಾಗವಹಿಸಿದ್ದರು