ಗಣೇಶ್ ಚತುರ್ಥಿ ಹಾಗೂ ಈದ್ ಮಿಲಾದ್ ಆಚರಣೆ ಪ್ರಯುಕ್ತ ಸರ್ಕಾರ ಜಾರಿಗೊಳಿಸಿರುವ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ನಿಯಮ ಪಾಲಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಜಾವಿದ್ ಇನಾಮ್ದಾರ್ ಹೇಳಿದರು ನಗರದ ಪೊಲೀಸ್ ಠಾಣೆಯ ಆವರಣದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಡ್ಡಾಯವಾಗಿ ಪರವಾನಿಗೆ ಪಡೆಯಬೇಕು ಎಲ್ಲಾ ಪರವಾನಿಗೆಗಳು ಒಂದೇ ಕಡೆಗಳಲ್ಲಿ ದೊರೆಯಲು ಠಾಣೆಯಲ್ಲಿ ವ್ಯವಸ್ಥೆ ಮಾಡಲಾಗದು ಎಂದರು. ಈ ಸಂದರ್ಭದಲ್ಲಿ ನಗರದ ವಿವಿಧ ಸಂಘಟನೆಯ ಮುಖಂಡರು ಶಾಂತಿ ಸಭೆಯಲ್ಲಿ ಭಾಗವಹಿಸಿದರು