ಮೇಜರ್ ಧ್ಯಾನ್ ಚಂದ್ ಹುಟ್ಟುಹಬ್ಬ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ವಿವಿಧ ಕ್ರೀಡಾಕೂಟಗಳನ್ನು ನಗರದ ಸರ್ .ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಿರಿಯರಿ ನಾಗರೀಕರಿಗೆ ವಾಕಥಾನ್, ಯುವಜನರಿಗೆ ಮತ್ತು ಮಕ್ಕಳಿಗೆ ಮ್ಯಾರಥಾನ್, ಹಾಗೂ ಯುವಕರಿಗೆ ವಾಲಿಬಾಲ್ ಮತ್ತು ಪುಟ್ಬಾಲ್ ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಯಿತು. ಅಪರ ಜಿಲ್ಲಾಧಿಕಾರಿ ಎಸ್.ಎಂ.ಮಂಗಳ ವಿವಿಧ ಕ್ರೀಡಾಕೂಟಗಳಿಗೆ ಚಾಲನೆ ನೀಡಿದರು.