ನಗರದಲ್ಲಿ ಹಿಂದೂ ಮಹಾಗಣಪತಿಯ ವಿಸರ್ಜನೆ ಶೋಭಾಯಾತ್ರೆಯು ಸಾವಿರಾರು ಜನರ ಸಮ್ಮುಖದಲ್ಲಿ ಶನಿವಾರ ಅದ್ದೂರಿಯಾಗಿ ನಡೆಯಿತು. ವಿಶ್ವ ಹಿಂದೂ ಪರಿಷತ್ ಹಾಗು ಬಜರಂಗದಳದಿಂದ ನಗರದ ಬಿಇಒ ಕಚೇರಿ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಿ ಪ್ರತಿ ದಿನ ವಿಶೇಷ ಪೂಜೆ ಸಲ್ಲಿಸಿ, ಶನಿವಾರ ಸಾವಿರಾರು ಜನರ ಸಮ್ಮುಖದಲ್ಲಿ ನಗರದ ಪ್ರಮುಖ ವೃತ್ತಗಳ ಮೂಲಕ ಹಿಂದೂ ಮಹಾಗಣಪತಿಯ ವಿಸರ್ಜನೆ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳ ನಾದಕ್ಕೆ ಯುವಕರು, ಮಹಿಳೆಯರು ಕುಣಿದು ಎಲ್ಲರ ಗಮನ ಸೆಳೆದರು.