ಕಲಘಟಗಿ: ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿರುವ ನಮ್ಮ ಕಲಘಟಗಿ ತಾಲೂಕಿನ ಗಳಗಿಹುಲಕೊಪ್ಪ, ಹುಲ್ಲಂಬಿ ಹಾಗೂ ತುಮರಿಕೊಪ್ಪ ಗ್ರಾಮಗಳ ಹೊಲಗಳಿಗೆ ಸಚಿವರಾದ ಸಂತೋಷ್ ಲಾಡ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.. ಕಾಡು ಪ್ರಾಣಿಗಳಿಂದಲೂ ಹಲವಾರು ಹೊಲಗಳ ಬೆಳೆಗಳಿಗೆ ಹಾನಿಯಾಗಿದ್ದು, ರೈತರಿಂದ ಮಾಹಿತಿ ಪಡೆದಿದ್ದೇನೆ. ನಷ್ಟಕ್ಕೊಳಗಾದ ಅನ್ನದಾತರಿಗೆ ಸೂಕ್ತ ಪರಿಹಾರ ಕೊಡಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ಇ. ವೇಳೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.