Download Now Banner

This browser does not support the video element.

ಭದ್ರಾವತಿ: ದಲಿತರ ಭೂಮಿಯನ್ನು ಎಂಪಿಎಂ ನವರು ಆಕ್ರಮಿಸಿದ್ದಾರೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಚಂದನಕೆರೆಯಲ್ಲಿ ಪ್ರತಿಭಟಿಸಿದೆ

Bhadravati, Shimoga | May 30, 2024
ದಲಿತ ಸಮುದಾಯದವರು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಎಂಪಿಎಂ ಕಾರ್ಖಾನೆಯವರು ಅತಿಕ್ರಮಿಸಿದ್ದಾರೆ ಎಂದು ಆರೋಪಿಸಿ ಚಂದನಕೆರೆಯಲ್ಲಿ ದಲಿತ ಸಮುದಾಯದವರು ಜಮೀನಿನಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ. ಸಾಗುವಳಿ ಮಾಡುತ್ತಿರುವ ಜಮೀನುಗಳಿಗೆ ಹಕ್ಕುಪತ್ರ ನೀಡಬೇಕು ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಗ್ರಾಮಸ್ಥರು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಸಂಘಟನೆಯ ಜಿಲ್ಲಾ ಸಂಚಾಲಕ ಟಿ ಹೆಚ್ ಹಾಲೇಶಪ್ಪ ಗ್ರಾಮಾಂತರ ಘಟಕದ ಸಂಚಾಲಕರಾದ ಶ್ರೀ ಹನುಮಂತಪ್ಪ ಸೇರಿದಂತೆ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Read More News
T & CPrivacy PolicyContact Us