ಶಿವಮೊಗ್ಗ ನಗರದ ಕೋಟೆ ಭೀಮೇಶ್ವರ ದೇವಸ್ಥಾನದ ಆವರಣದಲ್ಲಿ ಹಿಂದೂ ಮಹಾಸಭಾ ಗಣಪತಿಯ ಪ್ರತಿಷ್ಠಾಪನೆಯನ್ನು ಪ್ರತಿವರ್ಷದಂತೆ ಈ ವರ್ಷವೂ ಮಾಡಲಾಗಿದ್ದು ನಾಳೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ಹಾಗೂ ವಿಸರ್ಜನೆ ನಡೆಯುವ ಹಿನ್ನೆಲೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಎಸ್ಪಿ.ಮಿಥುನ್ ಕುಮಾರ್ ಅವರು ಶುಕ್ರವಾರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು. ಬಳಿಕ ನಾಳಿನ ಸಿದ್ಧತೆ ಕುರಿತಾಗಿ ಹಿಂದೂ ಮುಖಂಡರುಗಳ ಜೊತೆ ಮಾತುಕತೆ ನಡೆಸಿದರು.