ಸತತ ಮಳೆಯ ಹಿನ್ನೆಲೆಯಲ್ಲಿ ತಾಲೂಕಿನ ಎನಗುಂದಾ ಸೇತುವೆ ಸಂಪೂರ್ಣ ಜಲಾವ್ರತಗೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮಹೇಶ ಪಾಟೀಲ್ ಅವರು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಗುರುವಾರ ಮಧ್ಯಾಹ್ನ 1ಕ್ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರವಾಹ ಇರುವ ಸ್ಥಳಕ್ಕೆ ಹೋಗದಂತೆ ಮತ್ತು ಜನ ಜಾನುವಾರುಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.