ಬಳ್ಳಾರಿ ಶಾಸಕ ಭರತ್ ರೆಡ್ಡಿ ಅವರು ಸೆಪ್ಟೆಂಬರ್ 10,ಬುಧವಾರ ಸಂಜೆ 6 ಗಂಟೆಗರ ನಗರದ ಎಸ್ಪಿ ಸರ್ಕಲ್ ಹಾಗೂ ರಾಯಲ್ ಸರ್ಕಲ್ ಬಳಿ ನಡೆಯುತ್ತಿರುವ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಅವರು ಅಧಿಕಾರಿಗಳೊಂದಿಗೆ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಿ, ಅಗತ್ಯ ಸಲಹೆ–ಸೂಚನೆಗಳನ್ನು ನೀಡಿದರು. ನಗರದ ಅಭಿವೃದ್ಧಿ ಕಾರ್ಯಗಳು ಶೀಘ್ರದಲ್ಲೇ ಪೂರ್ಣಗೊಳ್ಳಲು ಕ್ರಮ ಕೈಗೊಳ್ಳುವಂತೆ ಶಾಸಕ ಭರತ್ ರೆಡ್ಡಿ ಸೂಚಿಸಿದರು.