ಮಹಾತ್ಮಾ ಗಾಂಧಿಜೀ ಜೀವನ ಸಂದೇಶಗಳನ್ನು, ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ ಎಂದು ಧಾರವಾಡ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ಹೇಳಿದರು. ಧಾರವಾಡ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜುನಲ್ಲಿ ಶನಿವಾರ ಮದ್ಯಾಹ್ನ 1 ಗಂಟೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಉದ್ಘಾಟಿಸಿ, ತಾಲೂಕಾ ಹಂತದಲ್ಲಿ ಪ್ರಬಂಧ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ, ಮಾತನಾಡಿದರು.